
ಶಿವಮೊಗ್ಗ : ಜಿಲ್ಲಾ ಯುವ ಜನತಾ ದಳ (ಜಾ) ವತಿಯಿಂದ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಶ್ರೀಮತಿ ಶಾರದಾ ಪೂರ್ಯನಾಯ್ಕ್ ಅವರ ಹುಟ್ಟುಹಬ್ಬವನ್ನು ಶಿವಮೊಗ್ಗ ಜಿಲ್ಲಾ ಜನತಾದಳ ಕಚೇರಿಯಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಮಧುಕುಮಾರ್, ಕಾರ್ಯ ಅಧ್ಯಕ್ಷ ಎಸ್ ಎಲ್ ನಿಖಿಲ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳ್ ಗೋಪಾಲಗೌಡ, ಮಾಜಿ ಶಾಸಕರಾದ ಕೆಬಿ ಪ್ರಸನ್ನ ಕುಮಾರ್, ಜಿಲ್ಲಾ ಜೆಡಿಎಸ್ ಕಾರ್ಯ ಅಧ್ಯಕ್ಷ ದಾದಾಪೀರ್, ರಾಜ್ಯ ಕಾರ್ಯದರ್ಶಿ ರಾಕೇಶ್ ಡಿಸೋಜ, ರೈತ ವಿಭಾಗದ ಜಿಲ್ಲಾಧ್ಯಕ್ಷ ದಾನೇಶ್, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಮಹಮ್ಮದ್ ಯೂಸುಫ್, ಸಿದ್ದಪ್ಪ, ಸಂಗಯ್ಯ, ರುದ್ರೇಶ್, ನೂರುಲ್ಲಾ, ಸಮ್ಮದ್, ಅವಿನಾಶ್ ಮತ್ತು ಪ್ರೇಮ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.