ಮೈಸೂರು-ತಾಳಗುಪ್ಪ ರೈಲಿನ ಇಂಜಿನ್ ಕಳಚಿ ತಪ್ಪಿದ ಭಾರಿ ಅನಾವುತ…
ಶಿವಮೊಗ್ಗ :- ರೈಲಿನ ಇಂಜಿನ್ ಮತ್ತು ಭೊಗಿ ಬೇರೆಯಾಗಿ ಭಾರಿ ಅನಾಹತ ವೊಂದು ತಪ್ಪಿದ ಘಟನೆ ಇಂದು ಸಂಜೆ ತುಂಬಿ ಹರಿಯುತ್ತಿರುವ ತುಂಗಾ ನದಿಯ ಸೇತುವೆ ಪಕ್ಕದಲ್ಲಿ ನಡೆದಿದೆ. ಮೈಸೂರಿನಿಂದ ಶಿವಮೊಗ್ಗ ರೈಲ್ವೆ ಸ್ಟೇಷನ್ ತಲುಪಿ ನಂತರ ತಾಳಗುಪ್ಪಕ್ಕೆ ಪ್ರತಿದಿನ ಸಾಗುವ…
ವಿಕಲಚೇತನರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವಾಗಬೇಕಿದೆ : ಶಾಸಕ ಆರಗ ಜನೇಂದ್ರ
ತೀರ್ಥಹಳ್ಳಿ :- ತಾಲ್ಲೂಕಿನಲ್ಲಿ ಸಾಕಷ್ಟು ಅಂಗವಿಕಲರಿದ್ದಾರೆ. ಅವರಾಗಿಯೇ ಅಂಗವಿಕಲತೆ ಮಾಡಿ ಕೊಂಡಿದ್ದಲ್ಲ, ಹುಟ್ಟುವಾಗಲೇ ಅಂಗವಿಕಲರಾಗಿದ್ದು, ಇಂದು ನಾವು ಅವರಲ್ಲಿ ಆತ್ಮ ಸ್ಥೈರ್ಯ ತುಂಬುವ ಕೆಲಸ ಮಾಡಬೇಕಿದೆ ಎಂದು ಮಾಜಿ ಗೃಹ ಸಚಿವ ಹಾಗೂ ಹಾಲಿ ಶಾಸಕ ಆರಗ ಜನೇಂದ್ರ ಹೇಳಿದರು. ಇಂದು…
ಇತಿಹಾಸ ಪ್ರಸಿದ್ದ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಆ. 9ರ ಶನಿವಾರ ಬೃಹತ್ ಅನ್ನಸಂತರ್ಪಣಾ ಕಾರ್ಯಕ್ರಮ
ಶಿಕಾರಿಪುರ :- ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ಆ. 9 ರ ಶನಿವಾರ ಇಲ್ಲಿನ ಎಪಿಎಂಸಿ ವರ್ತಕರು ಹಾಗೂ ರೈಸ್ ಮಿಲ್ ಮಾಲಿಕರ ವತಿಯಿಂದ ಆಗಮಿಸುವ ಸರ್ವ ಭಕ್ತಾಧಿಗಳಿಗೆ ಬೃಹತ್ ಅನ್ನ ಸಂತರ್ಪಣಾ ಕಾರ್ಯಕ್ರಮ…
ನ್ಯಾಯಬೆಲೆ ಅಂಗಡಿಗಳಿಗೆ ಪ್ರತಿ ತಿಂಗಳು 5ನೇ ತಾರೀಖಿನೊಳಗೆ ಪಡಿತರ ಹಂಚಿಕೆ ಮಾಡಲು ಒತ್ತಾಯ
ಶಿವಮೊಗ್ಗ :- ನ್ಯಾಯಬೆಲೆ ಅಂಗಡಿಗಳಿಗೆ ಪ್ರತಿ ತಿಂಗಳು 5ನೇ ತಾರೀಖಿನೊಳಗೆ ಪಡಿತರ ಹಂಚಿಕೆ ಮಾಡಬೇಕು ಎಂದು ರಾಜ್ಯ ಸಹಕಾರಿ ಪಡಿತರ ವಿತರಕರ ಸಂಘದ ಅಧ್ಯಕ್ಷ ಟಿ. ಕೃಷ್ಣಪ್ಪ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಆಹಾರ ಭದ್ರತೆ ಯೋಜನೆಯಡಿ…
ಅಂಧತ್ವದ ಆಧುನಿಕತೆಯ ಭರಾಟೆಗೆ ಸಿಲುಕಿ ಹದಿಹರೆಯದ ಮನಸ್ಸು ಸಂಪೂರ್ಣ ಕಲುಷಿತಗೊಳ್ಳುತ್ತಿದೆ : ನಾರಾಯಣ ರಾವ್
ಶಿವಮೊಗ್ಗ :- ಅಂಧತ್ವದ ಆಧುನಿಕತೆಯ ಭರಾಟೆಗೆ ಸಿಲುಕಿ ಹದಿಹರೆಯದ ಮನಸ್ಸು ಸಂಪೂರ್ಣ ಕಲುಷಿತಗೊಳ್ಳುತ್ತಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು. ನಗರದ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜಿನ ವತಿಯಿಂದ ಬುಧವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ಕಾಲೇಜಿನ ವಿದ್ಯಾರ್ಥಿನಿ…
5 ವರ್ಷ ಕೆಲಸ ಮಾಡಿದ ಕಾರ್ಮಿಕರಿಗೆ ಕಡ್ಡಾಯವಾಗಿ ಗ್ರಾಚುಟಿ ಪಾವತಿಸಬೇಕು : ಸಂತೋಷ್ ಎಸ್. ಲಾಡ್
ಶಿವಮೊಗ್ಗ :- ಬಡವರ ಕೈಯಲ್ಲಿ ಹಣ ಬಂದಾಗ ಮಾತ್ರ ದೇಶದ ಪ್ರಗತಿಯಾಗಲಿದ್ದು, ಬಡವರಿಗಾಗಿ ರೂಪಿಸಿರುವ ಯೋಜನೆಗಳನ್ನು ಅವರಿಗೆ ಸಮರ್ಪಕವಾಗಿ ತಲುಪಿಸಬೇಕು ಎಂದು ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ಕರೆ ನೀಡಿದರು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ…
ಮಾರ್ಚ್ ನಲ್ಲಿ ರೈಲ್ವೆ ಕೋಚಿಂಗ್ ಡಿಪೊ ಉದ್ಘಾಟನೆ : ಬಿ.ವೈ. ರಾಘವೇಂದ್ರ
ಶಿವಮೊಗ್ಗ :- ಇಂದಿನ ತಂತ್ರಜನ ಯುಗವಾಗದಲ್ಲಿ ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಬಹುಮುಖ್ಯವಾಗಿದ್ದು, ಅವರ ಮೇಲೆ ಹೆಚ್ಚಿನ ಗಮನ ಇಡಬೇಕಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಸಲಹೆ ನೀಡಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದಿಂದ ಕುವೆಂಪು ರಂಗಮಂದಿರದಲ್ಲಿ…
ಆಟೋ ಕಾಂಪ್ಲೆಕ್ಸ್‌ನಲ್ಲಿ ಕುಡಿಯುವ ನೀರು ಸೇರಿ ವಿವಿಧ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಮನವಿ
ಶಿವಮೊಗ್ಗ :- ಆಟೋ ಕಾಂಪ್ಲೆಕ್ಸ್‌ನಲ್ಲಿ ಶುದ್ಧ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ತಕ್ಷಣ ಕಲ್ಪಿಸಲು ಆಗ್ರಹಿಸಿ ಆಟೋ ಕಾಂಪ್ಲೆಕ್ಸ್ ಮಾಲೀಕರ ಸಂಘದಿಂದ ಇಂದು ನಗರಕ್ಕಾಗಮಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಶಾಸಕ…
ತೆರೆದ ಮನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸ್ವಾಮಿ ವಿವೇಕಾನಂದ ಶಾಲೆಯ ವಿದ್ಯಾರ್ಥಿಗಳು…
ಶಿವಮೊಗ್ಗ :- ನಗರದ ಪ್ರತಿಷ್ಠಿತ ಸ್ವಾಮಿ ವಿವೇಕಾನಂದ ಶಾಲೆಯ ವಿದ್ಯಾರ್ಥಿಗಳಿಗೆ ತೆರೆದ ಮನೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಜಯನಗರ ಪೊಲೀಸ್ ಠಾಣೆ ಪಿಐ ಸಿದ್ದೇಗೌಡ ಅವರು ಜಯನಗರ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿಗಳಿಗೆ ಪೊಲೀಸ್ ಠಾಣೆಯ ಕಾರ್ಯವೈಖರಿಯ ಬಗ್ಗೆ ಮಕ್ಕಳ ಹಕ್ಕುಗಳು, ಉಚಿತ ಮತ್ತು…
ಬೊಮ್ಮನಕಟ್ಟೆ ಬಿ ಬ್ಲಾಕ್ ವಾಸಿಗಳಿಗೆ ಹಕ್ಕುಪತ್ರ ನೀಡಲು ಆಗ್ರಹಿಸಿ ಪ್ರತಿಭಟನೆ
ಶಿವಮೊಗ್ಗ :- ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಬಿ ಬ್ಲಾಕ್‌ನಲ್ಲಿ ವಾಸಿಸುತ್ತಿರುವವರಿಗೆ ಹಕ್ಕುಪತ್ರ ನೀಡಬೇಕು ಮತ್ತು ಇಲ್ಲಿರುವ ಪಾರ್ಕ್‌ನ್ನು ಅಭಿವೃದ್ಧಿಪಡಿಸಬೇಕು ಎಂದು ಆಗ್ರಹಿಸಿ ಸರ್ ಎಂ. ವಿಶ್ವೇಶ್ವರಯ್ಯ ಕಟ್ಟಡ ಮತ್ತು ಕೂಲಿ ಕಾರ್ಮಿಕರ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ಅಲ್ಲಿನ ನಿವಾಸಿಗಳು ಇಂದು ಜಿಲ್ಲಾಧಿಕಾರಿ…