google.com, pub-9939191130407836, DIRECT, f08c47fec0942fa0

ವಿಕಸಿತ ಭಾರತದಿಂದ ಸಹಕಾರಿ ಕ್ಷೇತ್ರಕ್ಕೆ ದೊಡ್ಡ ಶಕ್ತಿ ಸಿಗಲಿದೆ : ಸಂಸದ ಯದುವೀರ್ ಕೃಷ್ಣ ದತ್ತ ಚಾಮರಾಜ್ ಒಡೆಯರ್

ಶಿವಮೊಗ್ಗ :- ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವ ಕಾಂಕ್ಷೆಯ ಯೋಜನೆಯಾದ ವಿಕಸಿತ ಭಾರತದಿಂದ ರಾಜ್ಯದ ಸಹಕಾರಿ ಕ್ಷೇತ್ರಕ್ಕೆ ದೊಡ್ಡ ಶಕ್ತಿ ಸಿಗಲಿದೆ ಎಂದು ಯಧುವೀರ್ ಕೃಷ್ಣ ದತ್ತ ಚಾಮರಾಜ್ ಒಡೆಯರ್ ಆಭಿಪ್ರಾಯಪಟ್ಟರು. ಆರ್ಯ ವೈಶ್ಯ ಶ್ರೀರಾಮ ಸಹಕಾರ ಸಂಘವು…

ಸೆ. 29ರ ನಾಳೆ ಸುಮಾರು ಅರ್ಧ ಶಿವಮೊಗ್ಗದಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ :- ಆಲ್ಕೋಳ ವಿವಿ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ನಿರ್ವಾಹಣಾ ಕೆಲಸ ಹಮ್ಮಿಕೊಂಡಿರುವ ಕಾರಣ ಸೆ. 29ರ ನಾಳೆ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಶಿವಮೊಗ್ಗ ನಗರದ ಸುಮಾರು 50ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ನಗರದ ಅಲ್ಕೋಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ,…

ಶಿವಮೊಗ್ಗ ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಓರಿಯಂಟೇಷನ್ ಕಾರ್ಯಕ್ರಮ ಉದ್ಘಾಟಿಸಿ

ಶಿವಮೊಗ್ಗ :- ನಮ್ಮ ಮಾತೃಭಾಷೆಯಲ್ಲಿ ಸಂಪೂರ್ಣ ಪಾಂಡಿತ್ಯ ಪಡೆಯುವ ಮೂಲಕ ಎಂತಹ ಬಹು ಭಾಷೆಯಲ್ಲಿಯು ಪ್ರಾವೀಣ್ಯತೆ ಪಡೆಯಲು ಸಾಧ್ಯ ಎಂದು ಐಐಟಿ ಧಾರವಾಡದ ಪ್ರಾಧ್ಯಾಪಕರು ಹಾಗೂ ಸಲಹೆಗಾರರಾದ ಡಾ. ಕೆ.ವಿ. ಜಯಕುಮಾರ್ ಅಭಿಪ್ರಾಯಪಟ್ಟರು. ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ…

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯವಿರುದ್ಧ ಇಂದು ಎಫ್‌ಐಆರ್ ದಾಖಲು

ಮೈಸೂರು :- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ನಿರೀಕ್ಷೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಂದುಎಫ್‌ಐಆರ್ ದಾಖಲಾಗಿದೆ. ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯನವರ…

ಸಾಗುವಳಿ ಪಡೆದ ಜಮೀನನ್ನು ಒಕ್ಕಲೆಬ್ಬಿಸುತ್ತಿರುವುದನ್ನು ಖಂಡಿಸಿ ಶಿವಮೊಗ್ಗದಲ್ಲಿ ರೈತರ ಬೃಹತ್ ಪ್ರತಿಭಟನೆ

ಶಿವಮೊಗ್ಗ :- ಅರಣ್ಯ ಅಧಿಕಾರಿಗಳು ಸಾಗುವಳಿ ಪಡೆದ ಜಮೀನನ್ನು ಒಕ್ಕಲೆಬ್ಬಿಸುತ್ತಿರುವುದನ್ನು ಖಂಡಿಸಿ ಹೊಳೆಹೊನ್ನೂರು ಹೋಬಳಿಯ ಅರಣ್ಯ ಹಕ್ಕು ಸಮಿತಿ ಮತ್ತು ಬಗರ್‌ಹುಕುಂ ಸಾಗುವಳಿದಾರರು ಹಾಗೂ ರೈತ ಪರ ಸಂಘಟನೆಗಳಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ…

ಹಿಂದೂ ಧಾರ್ಮಿಕ, ತೀರ್ಥಕ್ಷೇತ್ರಗಳನ್ನು ಸರ್ಕಾರದ ನಿಯಂತ್ರಣಗಳಿಂದ ಮುಕ್ತಗೊಳಿಸಲು ಒತ್ತಾಯಿಸಿ ವಿಹೆಚ್ ಪಿ ಪ್ರತಿಭಟನೆ

ಶಿವಮೊಗ್ಗ :-ಪವಿತ್ರವಾದ ಶ್ರದ್ಧಾ ಕೇಂದ್ರಗಳಾಗಿರುವ ಹಿಂದೂ ಧಾರ್ಮಿಕ ಮತ್ತು ತೀರ್ಥಕ್ಷೇತ್ರಗಳನ್ನು ಸರ್ಕಾರದ ದಬ್ಬಳಿಕೆ ಮತ್ತು ನಿಯಂತ್ರಣಗಳಿಂದ ಮುಕ್ತಗೊಳಿಸಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಶಾಖೆ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ದೇಶದ…

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ನೈತಿಕ ಬೆಂಬಲ ಸೂಚಿಸಿ ಶಿವಮೊಗ್ಗದ ಗಾಂಧಿ ಪಾರ್ಕ್ ನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ನೈತಿಕ ಬೆಂಬಲ ಸೂಚಿಸಿ ಪ್ರತಿಜವಿಧಿ ಸ್ವೀಕರಿಸುವ ಮೂಲಕ ಬಿಜೆಪಿ -ಜೆಡಿಎಸ್ ಷಡ್ಯಂತ್ರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಇಂದು ಗಾಂಧಿ ಪಾರ್ಕ್‌ನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಸಿದ್ಧರಾಮಯ್ಯ ಅವರು ಯಾವುದೇ…

ಕೋಟೆಗಂಗೂರು ರೈಲ್ವೆ ಕೋಚಿಂಗ್ ಟರ್ಮಿನಲ್ ಗುಣಮಟ್ಟದೊಂದಿಗೆ ತ್ವರಿತ ಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೋಮಣ್ಣ ಸೂಚನೆ

ಶಿವಮೊಗ್ಗ :- ಕೋಟೆಗಂಗೂರಿನಲ್ಲಿ ನಿರ್ಮಾಣವಾಗುತ್ತಿರುವ ರೈಲ್ವೇ ಕೋಚಿಂಗ್ ಟರ್ಮಿನಲ್ ರಾಜ್ಯದಲ್ಲೇ ಮೊದಲನೆಯದಾಗಿದ್ದು, ೨೦೨೬ ರೊಳಗೆ ಗುಣಮಟ್ಟದೊಂದಿಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚಿಸಿದ್ದೇನೆ ಎಂದು ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ತಿಳಿಸಿದರು. ಗುರುವಾರ ಶಿವಮೊಗ್ಗದ ಕೋಟೆಗಂಗೂರಿನಲ್ಲಿ ನಿರ್ಮಿಸಲಾಗುತ್ತಿರುವ…

ತಮ್ಮಡಿಹಳ್ಳಿ, ಪುರದಾಳು ಸುತ್ತಾ ಮುತ್ತ ತೋಟ ಗದ್ದೆಗಳಲ್ಲಿ ಓಡಾಡುತ್ತಿರುವ ಆನೆಗಳು…ಆತಂಕದಲ್ಲಿ ರೈತರು…

ಶಿವಮೊಗ್ಗ :- ತಾಲ್ಲೂಕಿನ ಆಯನೂರು ಹೋಬಳಿ ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಲುಮೆ ಜೆಡ್ಡು ಗ್ರಾಮದ ಕೆಲ ರೈತರುಗಳ ಗದ್ದೆ ಮೂಲಕ ಬುಧವಾರ ಬೆಳಗಿನಜಾವ ನಡೆದು ಹೋಗಿರುವುದರಿಂದ ಭತ್ತದ ಗದ್ದೆ ಮತ್ತು ಕೆಲ ತೋಟಗಳು ಹಾಳಾಗಿವೆ. ಮೂರು ಆನೆಗಳು ಈ ಭಾಗದಲ್ಲಿ…

ಬೊಮ್ಮನಕಟ್ಟೆ ಆಶ್ರಯ ಬಡಾವಣೆ ನಿವಾಸಿಗಳಿಗೆ ಖಾತೆ ದಾಖಲಿಸಿಕೊಡಲು ಒತ್ತಾಯಿಸಿ ಪಾಲಿಕೆ ಆಯುಕ್ತರಿಗೆ ಮನವಿ

ಶಿವಮೊಗ್ಗ :- ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಆಶ್ರಯ ನಿವಾಸಿಗಳಿಗೆ ಸಂಬಂಧಪಟ್ಟಂತೆ ಈಗ ಸ್ಥಗಿತಗೊಳಿಸಿರುವ ಎಲ್ಲಾ ರೀತಿಯ ಖಾತೆಗಳನ್ನು ಮತ್ತೆ ದಾಖಲಿಸಿಕೊಡಬೇಕು ಎಂದು ಮಹಾನಗರ ಪಾಲಿಕೆ ಮಾಜಿ ಸದಸ್ಯ ಹೆಚ್.ಸಿ.ಯೋಗೇಶ್ ಪಾಲಿಕೆ ಆಯುಕ್ತರಿಗೆ ಮನವಿ ಮಾಡಿದ್ದಾರೆ. ಬೊಮ್ಮನಕಟ್ಟೆಯ ಆಶ್ರಯ ಯೋಜನೆಯಡಿಯಲ್ಲಿ ಸಾವಿರಾರು ಬಡ…